ಬೆಳ್ತಂಗಡಿ: ಒಂದೇ ದಿನ ಸುರಿದ ಮಳೆಯಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದ ಕಕ್ಕಿಂಜೆ – ನೆರಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಕೃತಕ ತೋಡು ನಿರ್ಮಾಣವಾಗಿದೆ.
ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯು ವಾಡಿಕೆಗಿಂತ ಒಂದು ತಿಂಗಳು ತಡವಾಗಿ ಬಂದರೂ ಇನ್ನೂ ಕೂಡ ಚರಂಡಿಗಳ ನಿರ್ವಹಣೆಯನ್ನು ಸರಿಯಾಗಿ ಮಾಡದಿರುವ ಕಾರಣ ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯಿಂದ ಮಳೆ ನೀರು ರಸ್ತೆಯಲ್ಲೇ ಸಂಗ್ರಹವಾಗುತ್ತಿದ್ದು, ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಸ್ಥಳೀಯರು ಹಲವು ಬಾರಿ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಮರುಕಳಿಸುತ್ತಿದ್ದು, ಕೂಡಲೇ ಸಮರ್ಪಕ ನೀರು ಹರಿವಿನ ವ್ಯವಸ್ಥೆ ಕಲ್ಪಿಸಿ ರಸ್ತೆ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Discover more from Nammura Suddi
Subscribe to get the latest posts sent to your email.
