ಬೆಳ್ತಂಗಡಿ, ಮಾರ್ಚ್ 03: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.
ಸ್ಥಳೀಯ ರೈತಾಪಿ ವರ್ಗದ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಈ ಯೋಜನೆಯ ಅಗತ್ಯತೆಯನ್ನು ಸಣ್ಣ ನೀರಾವರಿ ಸಚಿವರ ಗಮನಕ್ಕೆ ತಂದು ಸಮಗ್ರವಾಗಿ ಮನವರಿಕೆ ಮಾಡಲಾಗಿದ್ದು, ಅದರ ಫಲವಾಗಿ ಅನುದಾನ ಮಂಜೂರಾಗಿದೆ. ಈ ಕಾಮಗಾರಿಯಿಂದ ಕೃಷಿ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಲಭಿಸುವುದರ ಜೊತೆಗೆ ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆಯೂ ಒದಗಲಿದೆ.
ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರಕ್ಕೆ ಹಾಗೂ ವಿಶೇಷ ಸಹಕಾರ ನೀಡಿದ ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading