ಕನ್ಯಾಡಿ (ಜುಲೈ: 16 ): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) , ಧರ್ಮಸ್ಥಳ, ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ ಫ್ಯಾಬ್ರಿಕ್ ಪೈಂಟ್ ಡಿಸೈನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಜುಲೈ 16 ರಂದು ಕನ್ಯಾಡಿ ಸೇವಾನಿಕೇತನದಲ್ಲಿ ನಡೆಯಿತು.
ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಪ್ರಭಾಕರ ಗೌಡ ಬೊಲ್ಮ ಮಾತನಾಡಿ ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕನ್ಯಾಡಿ ಸೇವಾಭಾರತಿಯ ಖಜಾಂಚಿ ಎ. ಜೈರಾಜ್ ಸಾಲ್ಯಾನ್ ರವರು ಮಾತನಾಡಿ, “ಇಂತಹ ತರಬೇತಿಗಳು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವುದರ ಜೊತೆಗೆ ಸ್ವಉದ್ಯೋಗದ ಅವಕಾಶಗಳನ್ನು ಸೃಷ್ಟಿಸುತ್ತವೆ. ತರಬೇತಿಯಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಸೇವಾಭಾರತಿ ಮುಂದೆಯೂ ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಪೂರಕವಾಗುವ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ,” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಫ್ಯಾಷನ್ ಡಿಸೈನರ್ ಮತ್ತು ತರಬೇತುದಾರರಾದ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ರವರು ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬಂಟರ ಸಂಘ ಉಜಿರೆ ವಲಯದ ಉಪಾಧ್ಯಕ್ಷರಾದ ಶ್ರೀಮತಿ ಪವಿತ್ರಾ ಸುಕುಮಾರ್ ಶೆಟ್ಟಿ, ಟ್ರಸ್ಟಿ ಶ್ರೀಮತಿ ಸ್ವರ್ಣಗೌರಿ, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷರಾದ ಶ್ರೀಮತಿ ಮಮತಾ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 13 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
ಶ್ರೀ ದುರ್ಗಾಮಾತೃ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಚಂದ್ರಾವತಿ ಸ್ವಾಗತಿಸಿ, ಸೇವಾಭಾರತಿ ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವ್ಯಾಲ್ಯೂಯೇಷನ್ ಕೋಆರ್ಡಿನೇಟರ್ ಕು. ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಶ್ವೇತಾ ಧನ್ಯವಾದವಿತ್ತರು.

Discover more from Nammura Suddi
Subscribe to get the latest posts sent to your email.
