
ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಐವನ್ ಡಿ’ಸೋಜಾ ಪ್ರಚೋದನಕಾರಿ ಹೇಳಿಕೆ ವಿರುದ್ಧ ಕೇಸು ದಾಖಲಿಸಲು ಒತ್ತಾಯಿಸಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಆ 28 ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಮಾತನಾಡಿ ಸರ್ಕಾರದ ಸಂವಿಧಾನ ವಿರೋಧಿ ನಡೆಯನ್ನು ಟೀಕಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ ,ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ್ ಬಿ ಎಸ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವರ,ಎಸ್ ಸಿ ಮೋರ್ಚಾ ಅಧ್ಯಕ್ಷ ರಾದ ಈಶ್ವರ್ ಬೈರ, ಎಸ್ ಟಿ ಮೋರ್ಚಾ ಅಧ್ಯಕ್ಷ ರಾದ ರಾಜೇಶ್ ಎಮ್ ಕೆ ಹಾಗೂ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ ಸ್ವಾಗತಿಸಿ,ಯುವಮೋರ್ಚಾ ಉಪಾಧ್ಯಕ್ಷ ಗಣೇಶ್ ಲಾಯಿಲ ವಂದಿಸಿದರು.

Discover more from Nammura Suddi
Subscribe to get the latest posts sent to your email.
