ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇವರ ನೇತೃತ್ವದಲ್ಲಿ ಆಗಸ್ಟ್ 18ರಂದು ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆಯಲ್ಲಿ ನಡೆಯಲಿರುವ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ತಾಲೂಕು ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ ಮತ್ತು ಗೌರವ ಅಧ್ಯಕ್ಷರಾದ ಹೆಚ್. ಪದ್ಮ ಗೌಡರವರ ಮೂಲಕ ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂಧರ್ಭದಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಕಡಿರುದ್ಯಾವರ, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಮತ್ತು ಧರ್ಣಪ್ಪ ಗೌಡ ಬಂದಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಕೋಶಾಧಿಕಾರಿ ಯುವರಾಜ್ ಅನಾರು, ಜತೆ ಕಾರ್ಯದರ್ಶಿ ಶ್ರೀನಾಥ್ ನಡ, ಸದಸ್ಯರುಗಳಾದ ಗೋಪಾಲಕೃಷ್ಣ ಗುಲ್ಲೋಡಿ, ಬಾಲಕೃಷ್ಣ ಬಿರ್ಮೊಟ್ಟು, ವಿಜಯ ಕುಮಾರ್ ನ್ಯಾಯತರ್ಪು, ಶ್ರೀಮತಿ ಉಷಾದೇವಿ ಉಜಿರೆ, ಭವಾನಿ ಕಾಂತಪ್ಪ ಗೌಡ ಮುಡಾಯೂರು, ಪ್ರಸನ್ನ ಗೌಡ ಪುತ್ತಿಲ, ಮಾಧವ ಗೌಡ ಬೆಳ್ತಂಗಡಿ, ದಿನೇಶ್ ಗೌಡ ಕೊಯ್ಯೂರು, ವಸಂತ ಗೌಡ ನಡ, ಮಹಿಳಾ ವೇದಿಕೆಯ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು, ಶ್ರೀ ಧ. ಮಂ. ಬಿ.ಎನ್.ವೈ.ಎಸ್. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಧರ್ಮೇಂದ್ರ ಗೌಡ ಬೆಳಾಲು, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಸದಸ್ಯರುಗಳು, ಗ್ರಾಮ ಸಮಿತಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.


Discover more from Nammura Suddi

Subscribe to get the latest posts sent to your email.

Leave a Reply

You missed