ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಭೂಷಣ್ ಬಾರ್ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ರಂದು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70ವ) ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ. ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ನಿಲ್ದಾಣದ ಸಮೀಪ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮೂಡಿಸಿತ್ತು.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading