ಬೆಳ್ತಂಗಡಿ: ಅನುಮಾನಸ್ಪದವಾಗಿ ಕಟ್ಟಡದ ಆವರಣದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್ 1 ರಂದು ಬೆಳಗ್ಗೆ ಅಂದಾಜು 7 ಗಂಟೆ ಸುಮಾರಿಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್ ಗೌಡ (32ವ) ಎಂಬಾತನ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಯುವಕನ ಸಾವಿನ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಅನುಮಾನ ಮೂಡಿದ್ದು, ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ ಎಂದು ತನಿಖೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಷ್ಠಧಿಕಾರಿ ಡಾ. ಅರುಣ್ ಕುಮಾರ್, ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮ ರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಮತ್ತು ತಂಡ, ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Discover more from Nammura Suddi
Subscribe to get the latest posts sent to your email.
