ಬೆಳ್ತಂಗಡಿ: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಸಕರಾದ ಹರೀಶ್ ಪೂಂಜರವರು ಮನವಿ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಆಗಹಿಸಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಸಂಪರ್ಕ ರಸ್ತೆಯಾದ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಲಾಗಿದೆ.
ಜನರ ಸುಗಮ ಸಂಚಾರ, ಸುರಕ್ಷತೆ ಹಾಗೂ ಈ ಭಾಗದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Discover more from Nammura Suddi
Subscribe to get the latest posts sent to your email.
