ಬೆಳ್ತಂಗಡಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನಡೆದ ಲಾಠಿ ಚಾರ್ಜ್ ಹಾಗೂ ರಾಹುಲ್ ಗಾಂಧಿಯವರ ಬಂಧನದ ವಿರುದ್ಧ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಜು.23ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಯಿತು.


ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ಅವರು “NEET ಪ್ರಶ್ನೆ ಪತ್ರಿಕೆ ಸೋರಿಕೆ ಕೃತ್ಯವು ಅಕ್ಷಮ್ಯ ಅಪರಾಧವಾಗಿದೆ. ದೆಹಲಿಯಲ್ಲಿ ನ್ಯಾಯ ಕೇಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಆರ್.ಎಸ್.ಎಸ್. ಗೂಂಡಾಗಳ ಮೂಲಕ ಹಲ್ಲೆಯನ್ನು ನಡೆಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣ ರಾಜೀನಾಮೆ ನೀಡಬೇಕು. ಮುಂದಿನ ದಿನಗಳಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೆ ಆಂದೋಲನ ನಡೆಸಲಿದ್ದೇವೆ ಎಂದು ಹೇಳಿದರು.


ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಕೆಪಿಸಿಸಿ ವಕ್ತಾರ ಅಮೃತ್ ಶೆಣೈ, ನಮಿತಾ, ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಮಾಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪುನೀತ್ ಕುಮಾರ್, ಪ್ರಚಾರ ಸಮಿತಿ ಆಶ್ರಪ್ ನೆರಿಯ, ಝೀನತ್, ಸಂತೋಷ್ ಕುಮಾರ್, ಪ್ರಜ್ವಲ್ ಜೈನ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading