ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟಿನ ಕಾರ್ಯದರ್ಶಿ ಎ.ವಿ. ಶೆಟ್ಟಿ ಸೋಮವಾರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿಯನ್ನು ಉದ್ಘಾಟಿಸಿದರು.


ಉಜಿರೆ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸೋಮವಾರ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ದೇವಳ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಸುಬ್ರಹ್ಮಣ್ಯ ಪ್ರಸಾದ್, ಯಶೋಧರ, ಸಂತೋಷ, ಸಂದೀಪ್ ರೈ, ಮಂಜುಳಾ ಉಪಸ್ಥಿತರಿದ್ದರು.
ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿಚ್ಛಿಸುವರು ಏಪ್ರಿಲ್ ೨೫ರೊಳಗೆ ಹೆಸರು ನೋಂದಾಯಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್: 0825626644, 9663464648, 8147263422


Discover more from Nammura Suddi

Subscribe to get the latest posts sent to your email.

Leave a Reply

You missed