ಕೊಯ್ಯೂರು: ಭಾರತೀಯ ಸಂಸ್ಕೃತಿಯು ಇಂದು ವಿಶ್ವದೆಲ್ಲೆಡೆ ಅನುಕರಣಯೋಗ್ಯವಾಗಿದೆ. ನಮ್ಮ ಧಾರ್ಮಿಕ ಆಚರಣೆಗಳು ಸನಾತನ ಸಂಸ್ಕೃತಿಯ ಹೆಗ್ಗುರುತುಗಳು ಎಂದು ರವೀಂದ್ರ ನಾಥ್ ಪೆರ್ಮದೆಯವರು ಅಭಿಪ್ರಾಯ ಪಟ್ಟರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು, ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆದೂರು ಪೇರಾಲ್ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಕೊಯ್ಯೂರು ಕೃಷಿ ಪತ್ತಿನ ಸಹಕಾರ ಸಂಘ (ನಿ) ಅಧ್ಯಕ್ಷರಾದ ರವೀಂದ್ರನಾಥ್ ಪೆರ್ಮದೆಯವರು ಉದ್ಘಾಟಿಸಿ ಶುಭ ಹಾರೈಸಿದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಯಶವಂತ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮ ಜೆಂಕಿನಡ್ಕ, ಭಜನಾ ಮಂಡಳಿಯ ಅಧ್ಯಕ್ಷರಾದ ಹೇಮಂತ್ ಗೌಡ ದೇಂತ್ಯಾರು ಬೊಟ್ಟು, ಗ್ರಾಮ ಪಂಚಾಯತ್ ಪೂರ್ವಾಧ್ಯಕ್ಷಕರಾದ ಶ್ರೀಮತಿ ದಯಾಮಣಿ ಪೆರ್ಮುದೆ ಇವರು ಉಪಸ್ಥಿತರಿದ್ದರು.
ಗಣೇಶೋತ್ಸವ ಸಮಿತಿಯ ಗೌರವ ಸಲಹೆಗಾರರಾದ ವಿಜಯ ಕುಮಾರ್ ಎಂ. ಕೊಯ್ಯೂರು ಸ್ವಾಗತಿಸಿದರು. ಭಜನಾ ಮಂಡಳಿಯ ಕಾರ್ಯದರ್ಶಿ ನಾರಾಯಣ ನಾಯ್ಕ ಧನ್ಯವಾದವಿತ್ತರು. ಚಂದ್ರಶೇಖರ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Discover more from Nammura Suddi
Subscribe to get the latest posts sent to your email.
