ಉಜಿರೆ: ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಆ.11ರಂದು ಬೆಳಗ್ಗೆ ನೀರಚಿಲುಮೆಯ ಸರಕಾರಿ ಶಾಲೆ ಬಳಿಯ ತಿರುವಿನಲ್ಲಿ ನಡೆದಿದೆ.
ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಮತ್ತು ಬೈಕ್ ಜಖಂಗೊಂಡಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಡಂತ್ಯಾರು, ಪಾರೆಂಕಿ ಪಂಗಳ ನಿವಾಸಿ ಬಾಬು ಕುಲಾಲ್ ಅವರ ಪುತ್ರ ಸೋಮನಾಥ(25ವ) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಅದಾಗಲೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿದ್ದ ಸಹಸವಾರ ಭರತ್ ಬಳ್ಳಮಂಜ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Discover more from Nammura Suddi
Subscribe to get the latest posts sent to your email.
