ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಸೆ.11 ರಂದು ಸಂಜೆ ನಡೆದಿದೆ. ಈ ಸಾವಿನ ಬಗ್ಗೆ ಬೆಳ್ತಂಗಡಿ ವೈದ್ಯರಿಗೆ ಅನುಮಾನ ಇರುವ ಕಾರಣದಿಂದ ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಕೆಲೆಂಜಿಮಾರ್ ನಿವಾಸಿ ಜಯಪ್ರಕಾಶ್ (38ವ) ಎಂದು ಗುರುತಿಸಲಾಗಿದೆ.ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿರುವ ಉಮೇಶ್ ಮಾಲೀಕತ್ವದ ದೇವಿಕಾ ಮರದ ಮಿಲ್‌ನಲ್ಲಿ ಜಯಪ್ರಕಾಶ್ ಅವರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಸೆ.11 ರಂದು ಸಂಜೆ ವೇಳೆಗೆ ಏಕಾಏಕಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಪರೀಕ್ಷಿಸಿದ ವೈದ್ಯರು ಜಯಪ್ರಕಾಶ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಸಾವಿನ ಬಗ್ಗೆ ಬೆಳ್ತಂಗಡಿ ವೈದ್ಯರಿಗೆ ಅನುಮಾನವಿರುವ ಕಾರಣದಿಂದ ಮಂಗಳೂರು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಮೃತದೇಹವನ್ನು ಸಾಗಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading