ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳು ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳ ಪೈಕಿ ಒಟ್ಟು ಮೂರು ವ್ಯಕ್ತಿಗಳ ಗುರುತನ್ನು ಅವರ ಕುಟುಂಬದ ಡಿಎನ್‌ಎ ಮೂಲಕ ಎಫ್‌ಎಲ್‌ಎಲ್ ದೃಢಪಡಿಸಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ಅಧಿಕಾರಿಗಳು 17-09-2025 ಮತ್ತು 18-09-2025 ರಂದು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಏಳು ಅಸ್ಥಿಪಂಜರಗಳನ್ನು ಪತ್ತೆ ಹಚ್ಚಿ ಎಫ್.ಎಲ್.ಎಲ್. ಗೆ ಕಳುಹಿಸಿದ್ದರು. ಅಸ್ಥಿಪಂಜರ ಪತ್ತೆಯಾದ ಜಾಗದಲ್ಲಿ ಕೆಲವೊಂದು ಐಡಿ ಕಾರ್ಡ್‌ಗಳು ಕೂಡ ಪತ್ತೆಯಾಗಿತ್ತು ಅದರ ಆಧಾರದಲ್ಲಿ ಕುಟುಂಬದವನ್ನು ಹುಡುಕಾಟ ನಡೆಸಿ ಕುಟುಂಬದವರ ಡಿ.ಎನ್.ಎ. ಪರೀಕ್ಷೆಯನ್ನು ಬೆಳ್ತಂಗಡಿ ನ್ಯಾಯಾಲಯದಲ್ಲಿ ಮಾಡಿ ಎಫ್.ಎಸ್.ಎಲ್. ಪ್ರಯೋಗಾಲಯಕ್ಕೆ ಕಳುಹಿಸಿದ್ದರು ಇದರ ವರದಿಯಲ್ಲಿ ಮೂವರ ಕುಟುಂಬದ ಡಿ.ಎನ್.ಎ. ಅಸ್ಥಿಪಂಜರಕ್ಕೆ ತಾಳೆಯಾಗಿರುವುದು ವರದಿಯಿಂದ ಖಚಿತವಾಗಿದೆ.
ಡಿಎನ್‌ಎ ಮೂಲಕ ಪತ್ತೆಯಾದವರ ವಿವರ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (70ವ), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಆದಿಶೇಷ ನಾರಾಯಣ (27ವ), ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿಯ ಕೃಷ್ಣಪ್ಪ (85ವ) ಸೇರಿ ಮೂವರ ಅಸ್ಥಿಪಂಜರ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಗಿರುವುದು ಡಿ.ಎನ್.ಎ. ಪರೀಕ್ಷೆ ಮೂಲಕ ಖಚಿತವಾಗಿದೆ.
ನಾಪತ್ತೆಯಾಗಿದ್ದ ಮೂವರು: ಕೊಡಗು ಜಿಲ್ಲೆಯ ಯು.ಬಿ. ಅಯ್ಯಪ್ಪ (70ವ) ಎಂಬವರು 25-06-2017ರಲ್ಲಿ ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದ ಬಗ್ಗೆ ಕುಟ್ಟ ವೃತ್ತದ ಶ್ರೀಮಂಗಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕುಟುಂಬದವರು ದಾಖಲಿಸಿದ್ದರು. ತುಮಕೂರು ಜಿಲ್ಲೆಯ ಆದಿಶೇಷ ನಾರಾಯಣ (27ವ) ಎಂಬಾತ ಬೆಂಗಳೂರು ಬಾರ್ ನಲ್ಲಿ ಕೆಲಸಕ್ಕೆ ಹೋಗಿದ್ದ ಬಳಿಕ 2-10-2013 ರಂದು ವಾಪಸ್ ಮನೆಗೆ ಬಂದು ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ. ಈತ ಪದೆ ಪದೆ ಮನೆಯಿಂದ ಹೋಗುತ್ತಿದ್ದ ಕಾರಣ ವಾಪಸ್ ಬರುತ್ತಾನೆಂದು ನಾಪತ್ತೆ ಪ್ರಕರಣ ಕುಟುಂಬದವರು ನೀಡಿಲ್ಲ. ಕೋಲಾರ ಜಿಲ್ಲೆಯ ಕೃಷ್ಣಪ್ಪ (85ವ) ವಯಸ್ಸದ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದು 22-10-2024 ರಂದು ಏಕಾಏಕಿ ಮನೆಯಿಂದ ಹೊರ ಹೋದವರು ವಾಪಸ್ ಮನೆಗೆ ಬಾರದೆ ಇದ್ದ ಕಾರಣ ಕುಟುಂಬದವರು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಅಸ್ಥಿಪಂಜರ ಕುಟುಂಬಕ್ಕೆ ಪಡೆಯಲು ಅವಕಾಶ: ಡಿಎನ್‌ಎ ವರದಿ ಪ್ರಕಾರ ಮೂರು ಕುಟುಂಬದವರು ಎಸ್.ಐ.ಟಿ.ಗೆ ಮನವಿ ಮಾಡಿದ್ರೆ ಕಟುಂಬಕ್ಕೆ ಅಸ್ಥಿಪಂಜರ ಪಡೆಯಲು ಅವಕಾಶವಿದೆ. ಎಸ್.ಐ.ಟಿ. ಅಧಿಕಾರಿಗಳು ಜು.15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆಯಲ್ಲಿ ಮೂವರ ಡಿ.ಎನ್.ಎ. ಮೂಲಕ ದೃಢಪಟ್ಟ ಬಗ್ಗೆ ವರದಿ ನೀಡಿದೆ.


Discover more from Nammura Suddi

Subscribe to get the latest posts sent to your email.

Leave a Reply

You missed