ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಡೆಯುವ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ ಇದರ ಪೂರ್ವಭಾವಿ ಸಭೆಯು ಸೆ.28ರಂದು ಶಾಸಕರ ನಿವಾಸ ಮಿಥಿಲಾದಲ್ಲಿ ಶಾಸಕ ಹರೀಶ್ ಪೂಂಜಾರವರ ಮಾರ್ಗದರ್ಶನದಲ್ಲಿ ನಡೆಯಿತು. ಈ ವೇಳೆ ಕಾರ್ಯಕ್ರಮ ರೂಪುರೇಷೆ, ಜವಾಬ್ದಾರಿ ಹಂಚಿಕೆ, ಆಯೋಜನೆ, ಇನ್ನಿತರ ವಿಚಾರದ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ಉಪಾಧ್ಯಕ್ಷರು ಗಳಾದ ಗಣೇಶ್ ಲಾಯಿಲ, ಪ್ರಕಾಶ್ ಪೂಜಾರಿ ಮುಜ್ಜಾಳೆ,ಬಾರ್ಯ, ಸುಜಿತ್ ಪೆರಾಡಿ, ಹರೀಶ್ ಗೌಡ ಸಂಬೊಲ್ಯ, ಕಾರ್ಯದರ್ಶಿಗಳಾದ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. ಬಂದಾರು, ಜಗದೀಶ್ ಹೆಗ್ಡೆ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ, ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಅವಿನಾಶ್ ಹೊಸಂಗಡಿ, ಅಶ್ವಿನ್ ಅಂಡಿಂಜೆ, ಪ್ರಸಾದ್ ಸುದೇಮುಗೇರು, ಮನೀಷ್ ಡಿ.ಎ. ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಂಚಾಲಕರಾದ ಲೋಕ್ಷತ್ ಗೌಡ ಅನಿಲ ಬಂದಾರು, ಇನ್ನಿತರರು ಉಪಸ್ಥಿತರಿದ್ದರು.

Discover more from Nammura Suddi
Subscribe to get the latest posts sent to your email.
