ಬೆಳ್ತಂಗಡಿ: ಸೆ.5 ರಂದು ನಡೆಯುವ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದ.ಕ. ಜಿಲ್ಲಾ ಮಟ್ಟದಲ್ಲಿ ಕೊಡ ಮಾಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.
ಇಳಂತಿಲ ಗ್ರಾಮದ ಅಂಡೆತಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಮುಂಡ್ರುಪ್ಪಾಡಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಚಿತ್ರ ಪ್ರಭಾ, ವೇಣೂರು ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ರವೀಂದ್ರ ಕೆ. ಇವರು 2026-27ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರುಗಳಿಗೆ ಸೆ.5ರಂದು ಮಂಗಳೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading