ಬೆಳ್ತಂಗಡಿ: ಇತ್ತೀಚೆಗೆ ಖಾಸಗಿ ವಾಹಿನಿಯಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸರ್ವಾಗೀಣ ಅಭಿವೃದ್ಧಿಗಾಗಿ ಶಾಸಕರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂ.ಎಲ್.ಎ” ಅವಾರ್ಡ್ ನೀಡಿ ಗೌರವಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ವತಿಯಿಂದ ಆ.8ರಂದು ಶಾಸಕರಾದ ಹರೀಶ್ ಪೂಂಜಾರಿಗೆ ಅವರ ಸ್ವಗೃಹ ಮಿಥಿಲಾದಲ್ಲಿ ಗೌರವಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮ ನೆರವೇರಿಸಲಾಯಿತು.
ಈ ಪ್ರಶಸ್ತಿಯು ಕೇವಲ ಶಾಸಕರಿಗೆ ಮಾತ್ರವಲ್ಲದೆ, ಬೆಳ್ತಂಗಡಿ ತಾಲೂಕಿನ ಪ್ರತಿಯೊಬ್ಬ ನಾಗರಿಕರಿಗೂ ಸಿಕ್ಕ ಗೌರವವಾಗಿದೆ ಎಂದು ಬೆಂಬಲಿಗರು, ಹಾಗೂ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಜಿಲ್ಲಾ ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್ ಮರೋಡಿ, ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ಉಪಾಧ್ಯಕ್ಷರುಗಳಾದ ಗಣೇಶ್ ಆರ್ ಲಾಯಿಲ, ಹರೀಶ್ ಗೌಡ ಸಂಭೋಲ್ಯ, ಪ್ರಕಾಶ್ ಪೂಜಾರಿ ಬಾರ್ಯ, ಸುಜಿತ್ ಪೆರಾಡಿ, ಕಾರ್ಯದರ್ಶಿಗಳಾದ ಗಿರೀಶ್ ಗೌಡ ಬಿ.ಕೆ. ಬಂದಾರು, ಸುಧೀರ್ ಪೂಜಾರಿ ಚಾರ್ಮಾಡಿ, ರಂಜು ಕೊಕ್ಕಡ, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ-ಕುಕ್ಕಳ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಅಶ್ವಿನ್ ಅಂಡಿಂಜೆ, ಪ್ರಸಾದ್ ಸುಧೇಮುಗೇರು, ಮನೀಷ್ ಡಿ.ಎ. ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಪವನ್ ಬಂಗೇರ ನಗರ, ಪ್ರದೀಪ್ ಕುಲಾಲ್ ಕಾಯರ್ತಡ್ಕ, ಸಂತೋಷ್ ಕುಮಾರ್ ಇಂದಬೆಟ್ಟು, ಪವನ್ ಶೆಟ್ಟಿ ಉಜಿರೆ ಹಾಗೂ ಮಹಾಶಕ್ತಿ ಪ್ರಮುಖರಾದ ಲೋಕ್ಷತ್, ಹರೀಶ್ ಕಾಶಿಪಟ್ಣ, ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.


Discover more from Nammura Suddi

Subscribe to get the latest posts sent to your email.

Leave a Reply

You missed