ಬೆಳ್ತಂಗಡಿ: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದಾದ್ಯಂತ ಮಳೆಯಾಗುತ್ತಿದ್ದು. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿ ಪ್ರಕಾರವಾಗಿ ಪುತ್ತೂರು ತಾಲೂಕು, ಬೆಳ್ತಂಗಡಿ ತಾಲೂಕು, ಸುಳ್ಯ ತಾಲೂಕು, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮತ್ತು ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜು, ಎಲ್ಲಾ ಐ.ಟಿ.ಐ. ಮತ್ತು ಡಿಪ್ಲೊಮಾ ಕಾಲೇಜುಗಳು 12ನೇ ತರಗತಿ (ಎಲ್ಲಾ ವಸತಿ ಶಾಲಾ ಕಾಲೇಜುಗಳೂ ಸೇರಿದಂತೆ) ವರೆಗೆ ದಿನಾಂಕ : 8-8-2026 ರಂದು ರಜೆಯನ್ನು ಘೋಷಿಸಲಾಗಿದೆ ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ನಿಯಾಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಳಿದಂತೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವಂತೆ ತಿಳಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಬಹುದು. Toll Free No: 1077, 0824-2442590
Discover more from Nammura Suddi
Subscribe to get the latest posts sent to your email.

