ಬೆಳ್ತಂಗಡಿ : ಮಾದಕವಸ್ತು ಮಾರಾಟ ಮತ್ತು ಸೇವನೆಯ ವಿರುದ್ಧ ಬೆಳ್ತಂಗಡಿ ಉಪವಿಭಾಗ ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಇದೀಗ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಆ.9ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ವೇಣೂರು ಮೇಲಿನ ಪೇಟೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅಮಲಿನಲ್ಲಿರುವುದು ಕಂಡುಬಂದಿದೆ. ವಿಚಾರಣೆ ನಡೆಸಿದಾಗ ಆತ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ನಿವಾಸಿ ಮಹಮ್ಮದ್ ಆಸೀಫ್ (35ವ) ಎಂದು ತಿಳಿದುಬಂದಿದ್ದು, ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.
ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ 27(b) ಮತ್ತು 22(a) ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading