ಬೈಪಾಡಿ: ಬೆಳ್ತಂಗಡಿಯ ಮುಳಿಯ ಜ್ಯುವೆಲ್ಲರ್‍ಸ್ ಗುಣಮಟ್ಟದ ಆಭರಣಗಳನ್ನು ಗ್ರಾಹಕರಿಗೆ ಒದಗಿಸುವ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಇದೀಗ ತನ್ನ ವ್ಯವಹಾರದಲ್ಲಿ ಬಂದ ಲಾಭಾಂಶವನ್ನು ಸಮಾಜಕ್ಕೆ ನೀಡುವ ಮೂಲಕ ಮಾದರಿ ಕಾರ್ಯವನ್ನು ಮಾಡಿದೆ.
ಬಂದಾರು ಗ್ರಾಮದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ವರೆಗಿನ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕರಾದ ಲೋಹಿತ್ ಬೆಳಾಲು, ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷರು ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading