
ಮೊಗ್ರು: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಪರಿಣಾಮ ಜು.19ರಂದು ಮೊಗ್ರು ಗ್ರಾಮದ ಕಂಚಿನಡ್ಕ ಆನಂದರವರ ಮನೆಗೆ ಗುಡ್ಡ ಕುಸಿದು ಬಿದ್ದಿದ್ದು, ಇದರ ಪರಿಣಾಮ ಮನೆಯ ಗೋಡೆ ಸಂಪೂರ್ಣ ಬಿರುಕು ಬಿಟ್ಟಿದ್ದು ಮನೆಗೆ ಹಾನಿಯಾಗಿದೆ. ಪ್ರಸ್ತುತ ಮನೆಯಲ್ಲಿ ವಾಸ್ತವ್ಯ ಮಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣ ಆಗಿದೆ.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಮಂಜುಶ್ರೀ, ಶಿವಣ್ಣ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Discover more from Nammura Suddi
Subscribe to get the latest posts sent to your email.
