ಬೆಳ್ತಂಗಡಿ: ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಅಮಾಯಕ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ ಬಜರಂಗದಳದ ಮುಖಂಡ ಚೇತನ್ ಹಾಗೂ ಬಜರಂಗದಳದ ಶಾಖೆಯಿಂದ ತರಬೇತಿ ಪಡೆದಿದ್ದ ಎಂಬ ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕೋಮು ಸೌಹಾರ್ದತೆ ಕದಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ದೂರು ನೀಡಲಾಗಿದೆ.

ಆರೋಪಿಯ ತಿರುಚಿದ ಭಾವಚಿತ್ರ ಹಾಗೂ ಪ್ರಚೋಧನಕಾರಿ ಸಂದೇಶಗಳನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಲಾಗಿದ್ದು ಈ ಸಂಬಂಧ ಕಾನೂನುಬಾಹಿರ ಕೃತ್ಯ ಎಸಗಿರುವ ರಶೀದ್ ಲಾಯಿಲ ಮತ್ತು ಅನ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading