ಬೆಳ್ತಂಗಡಿ: ಜುಲೈ 16 ರಂದು ಬಿ.ಸಿ. ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಬಂಟ್ವಾಳ ಕಕ್ಯೆಪದವಿನ ಅಮಾಯಕ ಯುವತಿಯ ಹತ್ಯೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ.
ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಇಂತಹ ಪ್ರಕರಣದಲ್ಲಿ ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಅರೋಪಿಯ ಮೇಲೆ ಕಠಿಣ ಕ್ರಮಕೈಗೊಳ್ಳ ಬೇಕು ಯುವತಿಯ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ. ಕುಟುಂಬದ ದುಖದೊಂದಿಗೆ ನಾನು ಇದ್ದೇನೆ ಎಂದು ಶಾಸಕ ಹರೀಶ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Discover more from Nammura Suddi
Subscribe to get the latest posts sent to your email.
