ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ವಿಶೇಷ ತನಿಖಾ ದಳ (ಎಸ್.ಐ.ಟಿ)ಯಲ್ಲಿ ಕಳೆದ ಒಂದು ವರ್ಷಗಳಿಂದ ಕರ್ತವ್ಯ ಮಾಡುತ್ತಿರುವ, ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ವಿನೋದ್ ರೆಡ್ಡಿಯನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.31 ರಂದು ಅಮಾನತು ಮಾಡಲಾಗಿದೆ.
ವರ್ಗಾವಣೆ ವಿಚಾರವಾಗಿ ಡೀಲಿಂಗ್ ಹಾಗೂ ತಿಂಗಳ ಮಾಮೂಲಿ ವಿಚಾರದಲ್ಲಿ ಮಾತನಾಡಿದ ಆಡಿಯೋ ವೈರಲ್ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲಾ ಎಸ್ಪಿ ದೀಪನ್ ಎಂ.ಎನ್. ಅವರು ಪಿ.ಎಸ್.ಐ. ಕಿರಣ್ ಪಾಟೀಲ್, ಪಿ.ಎಸ್.ಐ. ಕೃಷ್ಟಾ ಅರಿಕೆರೆ, ಪಿ.ಎಸ್.ಐ. ವಿನೋದ್ ರೆಡ್ಡಿ ಸೇರಿ ಮೂವರನ್ನು ಆ.31 ರಂದು ಪ್ರಾಥಮಿಕ ತನಿಖೆ ನಡೆಸಿ ಅಮಾನತು ಮಾಡಲಾಗಿದೆ.
ಹಳಿಯಾಳ ಪೊಲೀಸ್ ಠಾಣೆಯಿಂದ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆವಾಗಿದ್ದರೂ ಸರಕಾರ ವಿಶೇಷ ತನಿಖಾ ದಳ ರಚನೆಯಾದ ದಿನದಿಂದ ವಿನೋದ್ ರೆಡ್ಡಿ ಈವರೆಗೂ ಬೆಳ್ತಂಗಡಿಯಲ್ಲಿ ಎಸ್.ಐ.ಟಿ.ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
Discover more from Nammura Suddi
Subscribe to get the latest posts sent to your email.
