ಜಾಲ್ಸೂರು: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ತಾಲೂಕು ಹಾಗೂ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ಇದರ ಸಹಯೋಗದಲ್ಲಿ ಸೆ. 16 ರಂದು ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ತಂಡ ದ್ವಿತೀಯ ಸ್ಥಾನ ಪಡೆದು ಪ್ರಶಸ್ತಿ ಮುಡಿಗೆರಿಸಿಕೊಂಡಿದ್ದಾರೆ.

ತಂಡದ ಆಟಗಾರರಾದ ಸಹನಾ, ಹೇಮಾನ್ಯ, ಹೇಮಶ್ರೀ, ಸಾತ್ವಿ, ದಿಶಾ ಇವರುಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಹನಾ ಉತ್ತಮ ಆಲ್ ರೌಂಡರ್ ವೈಯಕ್ತಿಕ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading