ಮಂಗಳೂರು: ಪಾಂಗಳದ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಅಕ್ಟೋಬರ್ 1 ರಂದು ಬೆಳಗ್ಗೆ 8 ಗಂಟೆಗೆ ಮಂಗಳೂರಿಗೆ ಆಗಮಿಸಿದ್ದಾರೆ.ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್ ಹಾಗೂ ಲೋಕೇಶ್ ಜಗಲಸಾರ್ ಅವರು ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ SIT ಕಚೇರಿಗೆ 12.15ಕ್ಕೆ ಭೇಟಿ ನೀಡಿದ್ದಾರೆ.
ನೂತನವಾಗಿ ವ್ಯವಸ್ಥೆಗೊಳಿಸಲಾಗಿರುವ SIT ಕಚೇರಿಯಲ್ಲಿನ ಮೂಲಸೌಕರ್ಯ ಹಾಗೂ ಅಗತ್ಯ ವ್ಯವಸ್ಥೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.
ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದ ಸಂಸದರ ಕಚೇರಿ ಹಾಗೂ SAF (Special Action Force) ಕಚೇರಿ ಇರುವ ಕಟ್ಟಡದಲ್ಲೇ ಇದೀಗ ಸೌಜನ್ಯ ಪ್ರಕರಣದ ತನಿಖೆಗಾಗಿ SIT ಕಚೇರಿ ತೆರೆಯಲಾಗಿದೆ.
SIT ಅಧಿಕಾರಿಗಳ ಮಂಗಳೂರಿನ ಭೇಟಿ ಹಿನ್ನೆಲೆಯಲ್ಲಿ ಪ್ರಕರಣದ ಮುಂದಿನ ತನಿಖಾ ಪ್ರಕ್ರಿಯೆಗಳ ಬಗ್ಗೆ ಕುತೂಹಲ ಮೂಡಿದೆ.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading