ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಎ.30ರಂದು ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿದ್ದಾರೆ.
ಸಭೆಯನ್ನುದ್ದೇಶಿಸಿ ಮಾತನಾಡಿದ ಹರೀಶ್ ಪೂಂಜರವರು ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಅವರನ್ನು ಅತ್ಯಧಿಕ ಮತಗಳ ಅಂತರಗಳಿಂದ ಗೆಲ್ಲಿಸುವಂತೆ ಬೀದರ್ ಲೋಕಸಭಾ ಕ್ಷೇತ್ರದ ಮತದಾರರಲ್ಲಿ ಮನವಿಯನ್ನು ಮಾಡಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಮಾಜಿ ಶಾಸಕರಾದ ಎಂ.ವೈ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.