
ಬೆಳ್ತಂಗಡಿ : ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ 25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಲು ನಿವಾಸಿ ಸದಾಶಿವ ಶೆಟ್ಟಿ ಎಂಬವರ ಏಕೈಕ ಪುತ್ರ ಶೈಲೇಶ್ ಶೆಟ್ಟಿ (38ವ) ಎಂಬವರು ಮೇ 25 ರಂದು ರಾತ್ರಿ ಸುಮಾರು 8.30 ಕ್ಕೆ ತನ್ನ ಮನೆಯ ಕೆರೆಗೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಳೆದ ಆರು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಇವರು ಕೃಷಿಯನ್ನೇ ಕಾಯಕವನ್ನಾಗಿಸಿಕೊಂಡಿದ್ದರು.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಇನ್ನಷ್ಟೆ ಮಾಹಿತಿ ತಿಳಿಯಬೇಕಾಗಿದೆ.
