
ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ್ದು, ಆಕೆ ಆರು ತಿಂಗಳ ಗರ್ಭಿಣಿಯಾದ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಂತ್ರಸ್ತ ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಅಪ್ರಾಪ್ತ ಸೇರಿ ಮೂವರ ವಿರುದ್ಧ ಮೇ 31ರಂದು ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೋರ್ವಳಿಗೆ ಮೂವರು ಸೇರಿ ಒತ್ತಾಯಪೂರ್ವಕವಾಗಿ ಬಲತ್ಕಾರ ಮಾಡಿ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿಯು 6 ತಿಂಗಳ ಗರ್ಭಿಣಿಯಾಗಿದ್ದು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೇ 31ರಂದು ನೊಂದ ಬಾಲಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಗ್ಯಾಂಗ್ ರೇಪ್ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ಜೂ.1ರಂದು ಓರ್ವ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್ (26ವ), ಫಾರೂಕ್ (19ವ) ಹಾಗೂ ಮತ್ತೋರ್ವ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ.
ಬಂದಿತರ ಪೈಕಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೋರ್ವ ಅಪ್ರಾಪ್ತ ಬಾಲಕನನ್ನು ಮಂಗಳೂರು ಬಾಲ ನ್ಯಾಯಾಲಕ್ಕೆ ಹಾಜರುಪಡಿಸಿದ್ದು ಮಂಗಳೂರು ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.
