ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲದ ಎಸ್ಟಿ ಮೋರ್ಚಾ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್.ಕೆ. (33ವ) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಲಪ್ಪ ಗೌಡ ಕಜೆ (48ವ) ಎಂಬವರು ರಾಜೇಶ್ ಎಮ್.ಕೆ ಮೇಲೆ ಜಾತಿ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.5 ರಂದು ಆರೋಪಿ ಕುಶಲಪ್ಪ ಗೌಡ ಎಂಬವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ರಾತ್ರಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಯಲ್ಲಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆಗೊಳಾಗಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಜೇಶ್ ಎಮ್.ಕೆ. ನೀಡಿದ ದೂರಿನ ಮೇರೆಗೆ ಆರೋಪಿ ಕುಶಾಲಪ್ಪ ಗೌಡರ ವಿರುದ್ಧ ಅಟ್ರಾಸಿಟಿ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.