ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿದ ಘಟನೆ ಜೂ.27ರಂದು ಸಂಜೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿನಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20ವ) ಎಂಬವರು ಜೂ.27 (ಇಂದು) ರಂದು ಸಂಜೆ ವೇಳೆ ಮನೆಯ ರಸ್ತೆಗೆ ಪಾರ್ಸೆಲ್ ಬಂದ ಕಾರಣ ರಸ್ತೆಗೆ ಬಂದಿದ್ದಾರೆ. ಈ ವೇಳೆ ಅಲ್ಲಿ ಪಕ್ಕದಲ್ಲಿದ್ದ ವಿದ್ಯುತ್ ಕಂಬದ ಸ್ಟೇ ವೈಯರ್ ಗೆ ವಿದ್ಯುತ್ ಸ್ವರ್ಶಿಸಿ ನೀರಿಗೆ ಪ್ರವಹಿಸಿದ ಕಾರಣ ಪ್ರತೀಕ್ಷಾ ಶೆಟ್ಟಿಯವರಿಗೆ ವಿದ್ಯುತ್ ಆಘಾತ ಉಂಟಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯುವತಿಯ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಾಟ ಮಾಡಲಾಗಿದ್ದು, ಆಸ್ಪತ್ರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಭೇಟಿ ನೀಡಿದ್ದಾರೆ.
ಮೃತ ಯುವತಿ ಪ್ರತೀಕ್ಷಾ ಶೆಟ್ಟಿ ಕೊಕ್ಕಡದ ಮೇಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು.