
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅನುದಾನಿತ, ಸರಕಾರಿ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಇಂದು (ಜು.4) ರಜೆಯನ್ನು ಘೋಷಿಸಿದ್ದಾರೆ.
