ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 06-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ಗಳಿಗೆ ದಿನಾಂಕ: 06-07-2024 ರಂದು ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.
ಉಳಿದಂತೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ತೆರಳದಂತೆ ಸೂಚಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಪ್ರೀ ನಂ. : 1077 ಹಾಗೂ 0824-2442590

Leave a Reply

Discover more from Nammura Suddi

Subscribe now to keep reading and get access to the full archive.

Continue reading