ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಈ ಪ್ರಕರಣದ ರದ್ದತಿಗೆ ಕೋರಿ ಹರೀಶ್ ಪೂಂಜ ಅವರು ಹೈಕೋರ್ಟಿನಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್‌ನ ಜನಪ್ರತಿನಿಧಿಗಳ ನ್ಯಾಯಾಲಯ ಇಂದು (ಜು.5) ವಜಾಗೊಳಿಸಿದೆ.

ಇದು ಅನಾರೋಗ್ಯ ಮತ್ತು ಸೊಳ್ಳೆ ಉತ್ಪಾದನಾ ಕೇಂದ್ರ – ಈ ಶವಾಗಾರ ನೋಡಿದರೆ ಹೆಣವೂ ಎದ್ದು ಓಡುತ್ತದೆ

ಎರಡು ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಹಾಕಿದ ಅರ್ಜಿಯ ಬಗ್ಗೆ ಬೆಂಗಳೂರಿನ ಹೈಕೋರ್ಟ್‌ನ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಾಲಯ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾ ಮಾಡಿದೆ. ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದು ತಿಳಿದುಬಂದಿದೆ.