
ಬೆಳ್ತಂಗಡಿ : ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಳಂತಿಲ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ (35ವ) ಎಂಬವರು ಮನೆಯ ಸಮೀಪ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.
