
ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಸ್ತೆಯ ಅವೈಜ್ಞಾನಿಕ ಕಾಮಗಾರಿಯಿಂದ ಒಂದಿಲ್ಲೊಂದು ಅವಗಡಗಳು ನಡೆಯುತ್ತಲೇ ಇದ್ದು, ಅತ್ತ ಗುತ್ತಿಗೆದಾರ ಮತ್ತು ಇತ್ತ ಅಧಿಕಾರಿಗಳು ಗಾಢ ನಿದ್ದೆಯಲ್ಲಿದ್ದಾರೆ.
ಬೆಳ್ತಂಗಡಿ ತಾಲೂಕಿನ ಸೋಮತ್ತಡ್ಕದ ಸೀಟು ಬಳಿ ಜು.19 ರಂದು ಅವೈಜ್ಞಾನಿಕ ರಸ್ತೆ ಕಾಮಗಾರಿಯ ಪರಿಣಾಮ ಆ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದು ರಸ್ತೆಯ ಮದ್ಯದಲ್ಲಿಯೇ ಹೂತುಹೋದ ಘಟನೆ ನಡೆದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸ್ಥಳಕ್ಕೆ ಹೋಗಿ ಕಾಮಗಾರಿಯ ಇಂಜಿನಿಯರನ್ನು ತರಾಟೆಗೆ ತೆಗೆದುಕೊಂಡು ಲಾರಿಯನ್ನು ತಕ್ಷಣ ಕ್ರೇನ್ ಮೂಲಕ ಸ್ಥಳಾಂತರಿಸಲು ಎಚ್ಚರಿಕೆ ನೀಡಿದರು.
ಈ ವೇಳೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ, ಬೆಳ್ತಂಗಡಿ ಸಂಚಾರಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಇದ್ದರು.
