
ಬೆಳ್ತಂಗಡಿ : ಬೆಳ್ತಂಗಡಿಯ ವರಕಬೆ ಎಂಬಲ್ಲಿ ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.24ರಂದು ವರದಿಯಾಗಿದೆ. ಇದೇ ವೇಳೆ ವಿದ್ಯುತ್ ತಂತಿಗಳು ರಸ್ತೆಯ ಮೇಲೆ ಬಿದ್ದ ಪರಿಣಾಮ ಆ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಸವಾರರಿಬ್ಬರು ಸ್ಕಿಡ್ ಆಗಿ ಬಿದ್ದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.24 ರಂದು (ಇಂದು) ಬೆಳಗ್ಗೆ ವಿದ್ಯುತ್ ತಂತಿಯ ಮೇಲೆ ಮರದ ಗೆಲ್ಲು ಬಿದ್ದ ಪರಿಣಾಮ ಮದಡ್ಕ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ಏಕಾಏಕಿ ವಿದ್ಯುತ್ ಕಂಬವೊಂದು ಮುರಿದುಬಿದ್ದಿದೆ. ಈ ವೇಳೆ ವಿದ್ಯುತ್ ತಂತಿಯು ರಸ್ತೆಯ ಮೇಲೆ ಬಿದ್ದಿದ್ದು, ಈ ರಸ್ತೆಯಲ್ಲಿ ಚಲಿಸುತ್ತಿದ್ದ ಎರಡು ಬೈಕ್ ಸವಾರರು ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಘಟನೆಯ ವೇಳೆ ವಿದ್ಯುತ್ ಲೈನ್ ಆಫ್ ಆದ ಕಾರಣ ಬೈಕ್ ಸವಾರರು ಮತ್ತು ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದಿದ್ದರಿಂದ ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

