ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿ ಪಿಕಪ್ ವಾಹನದಲ್ಲಿ ಮೊಟ್ಟೆ ಸಾಗಾಟ ಮಾಡುವ (ಸುವರ್ಣ ಎಗ್ ಲೈನ್ಸ್) ವೃತ್ತಿಯಲ್ಲಿರುವ ವಿಟ್ಲ ಕಸಬ ಗ್ರಾಮದ ಜೋಗಿಮಠ ನಿವಾಸಿ ವಿವಾಹಿತನಾಗಿರುವ ಸತೀಶ್ ಸುವರ್ಣ (38ವ) ಎಂಬಾತ ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ. ಜು.21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುತ್ತಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿರುತ್ತಾನೆ ಎಂದು ಯುವತಿ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿರುತ್ತಾಳೆ.
ಯುವತಿಯ ದೂರನ್ನು ಸ್ವೀಕರಿಸಿದ ಉಪ್ಪಿನಂಗಡಿ ಪೊಲೀಸರು ಕಲಂ : 64(1), 351 (2) BNS-2023 ಕಲಂ4 ಪೋಕೋ ಕಾಯ್ದೆ- 2012 ರಂತೆ ಅಪರಾಧ ಸಂಖ್ಯೆ : 104/2024 ದಾಖಲಿಸಿಕೊಂಡು, ಸೆ.12 ರಂದು ವಿಟ್ಲ ಕಸಬ ಗ್ರಾಮದ ಜೋಗಿಮಠ ನಿವಾಸಿ ಆರೋಪಿ ಸತೀಶ್ ಸುವರ್ಣ(38) ನನ್ನು ಬಂಧಿಸಿದ್ದಾರೆ.

Leave a Reply

Discover more from Nammura Suddi

Subscribe now to keep reading and get access to the full archive.

Continue reading