ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾದ ಹಿನ್ನೆಲೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 25-07-2025 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರು ರಜೆಯನ್ನು ಘೋಷಿಸಿದ್ದಾರೆ.