ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್‌ನಲ್ಲಿ 18-12-2022 ರಂದು ಶ್ರೀಧರ(30ವ) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್ ಬಿ. ಮುಗೇರ ಮಾ.11 ರಂದು ರಾತ್ರಿ 9.45ಕ್ಕೆ ಶಿಬಾಜೆಯ ಸಾರಾ ಫಾರ್ಮ್ ತೋಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. (ನಮ್ಮೂರ ಸುದ್ದಿ ನ್ಯೂಸ್ ವರದಿ)
ಎಸ್.ಐ.ಟಿ. ಅಧಿಕಾರಿಗಳು ಮಾ.3 ರಂದು ವಿಚಾರಣೆಗಾಗಿ ನೋಟಿಸ್ ನೀಡಿ ಕರೆದು ಶ್ರೀಧರ ಕೊಲೆ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದರು. ಈ ನಡುವೆ ದೂರುದಾರ ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ ಎಂದು ನಿಖರವಾಗಿ ತಿಳಿದುಬಂದಿಲ್ಲ.