ಬೆಳ್ತಂಗಡಿ: 10ನೇ ತರಗತಿಯ ಬಳಿಕ ಮುಂದೇನು? ಎಂದು ವಿದ್ಯಾರ್ಥಿಗಳಲ್ಲಿ ಕಾಡುವ ಪ್ರಶ್ನೆಗೆ ಉತ್ತರ ಒದಗಿಸುವ ಸಲುವಾಗಿ, ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ ವನ್ನು ಇದೇ ಏಪ್ರಿಲ್ 3 ರಿಂದ 6 ವರೆಗೆ ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ತಮ್ಮ ಅನುಕೂಲಕರ ದಿನಗಳಲ್ಲಿ ಬಂದು ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಸಲುವಾಗಿ ನಾಲ್ಕು ದಿನಗಳ ಕಾಲ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಪರೀಕ್ಷೆಗೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಪ್ರತಿದಿನ ಬೆಳಗ್ಗೆ 10.30 ರಿಂದ 11 ಗಂಟೆವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.00 ರ ವರೆಗೆ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಕ್ಯಾಂಪಸ್‌ನಲ್ಲಿ ಪರೀಕ್ಷೆ ಆಯೋಜಿಸಲಿದೆ.
ಈ ಪರೀಕ್ಷೆಯಲ್ಲಿ ವಿಜ್ಞಾನ (Science) ವಿಭಾಗದಿಂದ 10 ಹಾಗೂ ಗಣಿತ (Mathematics) ವಿಭಾಗದಿಂದ 20 ಪ್ರಶ್ನೆಗಳಿರಲಿವೆ. ಪರೀಕ್ಷೆ ಅವಧಿ 30 ನಿಮಿಷಗಳಾಗಿದ್ದು ಈ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸಲಾಗಿದೆ.
ಅತೀ ಹೆಚ್ಚು ಅಂಕ ಗಳಿಸಿದರೆ ಲ್ಯಾಪ್ಟಾಪ್:
ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನವಾಗಿ ಲ್ಯಾಪ್ಟಾಪ್ ನೀಡಲಾಗುವುದು. ಗಮನಾರ್ಹ ಸಾಧನೆ ಮಾಡಿದ ವಿಜೇತರಿಗೆ ಟ್ಯಾಬ್‌ಗಳು ಬಹುಮಾನವಾಗಿ ನೀಡಲಾಗುತ್ತದೆ. ಕಾಲೇಜಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ, ಪ್ರತಿಭಾ ಪರೀಕ್ಷೆಯಲ್ಲಿ ಪಡೆಯುವ ಅಂಕದ ಮೇರೆಗೆ, ವಿಶೇಷ ವಿದ್ಯಾರ್ಥಿ ವೇತನದ ಅವಕಾಶವನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯುವಂತೆ ತಿಳಿಸಲಾಗಿದೆ. ನೋಂದಣಿಗಾಗಿ ಇಂದೇ 7618775600 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Discover more from Nammura Suddi

Subscribe now to keep reading and get access to the full archive.

Continue reading