ಬೆಳ್ತಂಗಡಿ: ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲದ ಘಟನೆ ಬೆಳ್ತಂಗಡಿಯ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಮೇ 19 ರಂದು ಸಂಜೆ 4 ಗಂಟೆ ಸುಮಾರಿಗೆ ಏಳು ಸ್ನೇಹಿತರ ತಂಡ ಈಜಲು ಹೋಗಿ ಓರ್ವ ಬೆಳ್ತಂಗಡಿ ತಾಲೂಕಿನ ಉಜಿರೆ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ (ಈಸಿಎ) ವಿದ್ಯಾರ್ಥಿ ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21ವ) ಎಂಬಾತ ನೀರುಪಾಲಾಗಿದ್ದಾನೆ. ನದಿಯಲ್ಲಿ ಯುವಕನ ಮೃತದೇಹ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಿದ ಬಳಿಕ ರಾತ್ರಿ ಸುಮಾರು 9.40 ರ ವೇಳೆಗೆ ದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳ, ಶೌರ್ಯ ವಿಪತ್ತು ಪಡೆ ಆಗಮಿಸಿ ಕಾರ್ಯಚರಣೆಯನ್ನು ನಡೆಸಿದ್ದು ಕಡೆಗೂ ಮೃತದೇಹ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಯಾಚರಣೆಗೆ ಸಹಕಾರ ನೀಡಿದ್ದಾರೆ.

Leave a Reply

Discover more from Nammura Suddi

Subscribe now to keep reading and get access to the full archive.

Continue reading