ಬೆಳ್ತಂಗಡಿ: ಬಂಗ್ಲೆಗುಡ್ಡೆಯಲ್ಲಿ ಮಾನವನ ’ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್.ಎಸ್.ಎಲ್. ಅಧಿಕಾರಿಗಳು ಖಚಿತ ಪಡಿಸಿ ಎಸ್.ಐ.ಟಿ. ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್.ಎಸ್.ಎಲ್. ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್.ಐ.ಟಿ. ಅಧಿಕಾರಿಗಳು ಮೇ 21 ರಂದು ಮಧ್ಯಾಹ್ನ 2.40ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಕರೆದುಕೊಂಡು ಬಂದು ಪರಿಶೀಲನೆ ನಡೆಸಿ ಮಹಜರು ಕಾರ್ಯ ಆರಂಭಿಸಿದ್ದಾರೆ.