ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಐದೂವರೇ ಕೋಟಿ ಮೌಲ್ಯದ ಮಾದಕವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ನಾಲ್ಕನೇ ಆರೋಪಿಯಾಗಿ ಅಂಬುಲೆನ್ಸ್ ಮೂಲಕ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ಬೆಳ್ತಂಗಡಿಯ ಜಲೀಲ್ @ ಬಾಬಾ (42ವ) ಇದೀಗ ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾಗಿ ಅಡಗಿಕುಳಿತಿದ್ದಾನೆ ಎನ್ನಲಾಗಿದೆ.

ಕಳೆದ 8 ದಿನಗಳಿಂದ ಮಂಗಳೂರು ಸಿಸಿಬಿ ಪೊಲೀಸರ ಬಂಧನದ ಭೀತಿಯಿಂದ ಎರಡು ಮೊಬೈಲ್ ಸ್ವಿಚ್ಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿರುವ ಜಲೀಲ್ ಬಾಬಾ ತನ್ನ ಗೆಳೆಯರ ಸಹಾಯದಿಂದ ಜು.25 ರಂದು ಶನಿವಾರ ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಿಂದ ದುಬೈ ದೇಶಕ್ಕೆ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ಬಹಿರಂಗವಾಗಿದೆ. ಈ ಬಗ್ಗೆ ಪೊಲೀಸರಯ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

