ನಡ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ, ಮಹಿಳಾ ಘಟಕ, ಯುವ ವೇದಿಕೆ, ನಡ ಇವರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಜುಲೈ 26 ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ವಾಣಿ ವಿದ್ಯಾ ಸಂಸ್ಥೆಗಳು ಬೆಳೆದು ಬಂದ ಹಾದಿಯನ್ನು ವಿವರಿಸಿ ಗೌಡ ಸಮಾಜದವರು ಹೆಚ್ಚಿನ ಸಾಧನೆಯನ್ನು ಮಾಡಬೇಕು ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಇವರು ಮಾತನಾಡಿ ನಾವು ಜಾಗೃತರಾಗಬೇಕು, ಒಗ್ಗಟ್ಟಾಗಬೇಕು ಎಂದು ಕರೆನೀಡಿ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಹಾಬಲ ಗೌಡ ಇವರು ಆಟಿ ತಿಂಗಳ ಮಹತ್ವದ ಬಗ್ಗೆ ಸವಿಸ್ತಾರವಾಗಿ ಉಪನ್ಯಾಸ ನೀಡಿದರು.
ಹತ್ತನೇ ತರಗತಿಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಯಂ. ಗೌಡ ಇವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಜೊತೆಗೆ ಕೋಕೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಗ್ರಾಮದ ಪ್ರತಿಭೆಗಳಾದ ಸುಚಿತ್ರ ಗೌಡ, ಭಾಗ್ಯಶ್ರೀ ಕೆ. ಗೌಡ ಇವರಿಗೂ ಕೂಡಾ ಸನ್ಮಾನದ ಗೌರವ ನೀಡಲಾಯಿತು.
ಗ್ರಾಮದ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ. ಎಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಮೂಲಕ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯ ದಂಪತಿಗಳನ್ನು ಗುರುತಿಸಿ ಗೌರವಿಸಲಾಯಿತು.
ಸಭಾಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಸೌಮ್ಯ ಯತೀಶ್ ಗೌಡ ವಹಿಸಿದ್ದರು. ಸಮಾರಂಭದಲ್ಲಿ ಸ್ಪಂದನಾ ಸೇವಾ ಸಂಘದ ಸಂಚಾಲಕರು ಹಾಗೂ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿಯಾದ ಸುರೇಶ್ ಕೌಡಂಗೆ, ತಾಲೂಕು ಮಹಿಳಾ ವೇದಿಕೆ ಕಾರ್ಯದರ್ಶಿ ಶ್ರೀಮತಿ ಲೀಲಾವತಿ, ಗ್ರಾಮ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ ಗೌಡ, ಯುವ ವೇದಿಕೆ ನಡ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಹಾಗೂ ಕಾರ್ಯದರ್ಶಿ ಉಮೇಶ್ ಗೌಡ ಭಾಗವಹಿಸಿದ್ದರು.
ಗೌರವಾಧ್ಯಕ್ಷೆ ಮಮತಾ ಶ್ರೀನಾಥ್ ಸ್ವಾಗತಿಸಿ, ಉಮಾವತಿ ಧನ್ಯವಾದ ಹೇಳಿದರು. ಲಲಿತಾ ಸುಭಾಷ್ ಚಂದ್ರ ಗೌಡ, ಚಿತ್ರ ಕರುಣಾಕರ ಗೌಡ, ಹರ್ಣಿ, ತುಳಸಿ ಹರಿಶ್ಚಂದ್ರ ಗೌಡ, ಪವಿತ್ರ ದಿನೇಶ್ ಗೌಡ ಮತ್ತು ಲಲಿತಾ ಒಬ್ಬಯ್ಯ ಗೌಡ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.
ಕಾರ್ಯಕ್ರಮದ ನಿರ್ವಹಣೆಯನ್ನು ರತ್ನಾವತಿ ಲೋಕೇಶ್ ಗೌಡ ನೆರವೇರಿಸಿದರು. ನಳಿನಿ ಮತ್ತು ಬಳಗ ಪ್ರಾರ್ಥನೆ ನೆರವೇರಿಸಿದರು. ಆಟಿಯ ವಿಶೇಷ ಖಾದ್ಯಗಳು ಕಾರ್ಯಕ್ರಮಕ್ಕೆ ಬಂದಿದ್ದವರ ಹಸಿವನ್ನು ತಣಿಸಿತು.

