ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ.ವಿ. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಜನೆಯಲ್ಲಿ ರಾಗ, ತಾಳ ಮತ್ತು ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಒಂದು ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಆಸಕ್ತರು ಆಗೋಸ್ತು 31ರ ಒಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9844239233, 9663464648, 08256-266644

 

Leave a Reply

Discover more from Nammura Suddi

Subscribe now to keep reading and get access to the full archive.

Continue reading