ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅಂತರ್ ರಾಜ್ಯ ಕಳ್ಳನ ಬಂಧನ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬೆಳ್ತಂಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಅಜರಮಾರು ನಿವಾಸಿ ಹೈಡೋಸ್ ಮಗನಾದ ಕುಖ್ಯಾತ ಸರಣೆ ಕಳ್ಳ ಹಮೀದ್ ಕುಂಞಮೋನು @ ಜಾಫರ್ @ ಹಮೀದ್ @ ಲಾಡಿ ಹಮೀದ್(49ವ) ಎಂಬಾತನನ್ನು ಬೆಳ್ತಂಗಡಿ…
ಸರ್ವರಿಗೂ ಸಮಪಾಲು ನೀಡಿರುವ ಈ ಐತಿಹಾಸಿಕ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ : ರಕ್ಷಿತ್ ಶಿವರಾಂ
ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಈ ಐತಿಹಾಸಿಕ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ. ವಿದ್ಯಾರ್ಥಿ, ಯುವಜನ, ಮಹಿಳಾ, ರೈತರು , ಕೂಲಿಕಾರರ ಪರವಾಗಿರುವ, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳ ಅಭಿವೃದ್ಧಿ ದೃಷ್ಟಿಕೋನದಿಂದ ಕೂಡಿದ ಬಜೆಟ್ ಇದಾಗಿದೆ.ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಎರಡು ಹೊಸ ಪೋಲಿಸ್ ಠಾಣೆಗಳ ಮಂಜೂರು, ಹಲವು ವರ್ಷಗಳ ಜನರ ಬಹುಮುಖ್ಯ ಬೇಡಿಕೆಯಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜ್ ಗೆ ಪೂರಕವಾಗಿ ನೂತನ ಆಸ್ಪತ್ರೆ…
ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ – ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ : ಮಾ.06: ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.ಪ್ರಸಕ್ತ ಸಾಲಿನಲ್ಲಿ ಜಿ.ಎಸ್.ಟಿ. ಉತ್ತಮ ಮಟ್ಟದಲ್ಲಿ ಸಂಗ್ರಹವಾಗಿದ್ದು ಸಹಜವಾಗಿ ಶಾಸನಬದ್ದವಾಗಿ ರಾಜ್ಯದ ಪಾಲಿಗೆ ಹೆಚ್ಚಿನ ಸಂಪನ್ಮೂಲ ಲಭ್ಯವಾಗಿದ್ದು ಅಸಮರ್ಪಕ ಆಡಳಿತ ನೀತಿಯಿಂದ ರಾಜಸ್ವ ಕೊರತೆಯುಂಟಾಗಿ ಮುಂಗಡ ಪತ್ರದಲ್ಲಿ ಪ್ರಸ್ತಾಪಿಸಿರುವ ಹೇರಳ ಸಾಲದಿಂದ ವಿತ್ತೀಯ ಕೊರತೆ ಸಾಲ…
ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ- ತನಿಖೆಗೆ ಹಾಜರಾಗಲು ದೂರುದಾರರಿಗೆ ನೋಟಿಸ್ ಜಾರಿ ಮಾಡಿದ ಎಸ್‌ಐಟಿ
ಬೆಳ್ತಂಗಡಿ: ಶಿಬಾಜೆಯ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್‌ಐಟಿ ಅಧಿಕಾರಿಗಳು ದೂರುದಾರ ಹರೀಶ್ ಬಿ. ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್ ಗುತ್ತು ಮನೆಯ ತೋಟದಲ್ಲಿ 18-12-2022 ರಂದು ಶ್ರೀಧರ (30ವ) ಎಂಬವರ ಅನುಮಾನಾಸ್ಪದ ಸಾವಿನ ಸಂಬಂಧ ಮರುತನಿಖೆ ನಡೆಸಲು ಹೈಕೋರ್ಟ್ ಆದೇಶ ಮಾಡಿದಂತೆ ಎಸ್.ಐ.ಟಿ. ಅಧಿಕಾರಿಗಳು ಮಾ.2 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.ಪ್ರಕರಣ ಸಂಬಂಧ ಶ್ರೀಧರ ಕೊಲೆಯ ಬಗ್ಗೆ ಧರ್ಮಸ್ಥಳ…
ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ
ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟಿನ ಕಾರ್ಯದರ್ಶಿ ಎ.ವಿ. ಶೆಟ್ಟಿ ಸೋಮವಾರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿಯನ್ನು ಉದ್ಘಾಟಿಸಿದರು. ಉಜಿರೆ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸೋಮವಾರ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿ ಎ.ವಿ. ಶೆಟ್ಟಿ…
ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ, ಮಾರ್ಚ್ 03: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.ಸ್ಥಳೀಯ ರೈತಾಪಿ ವರ್ಗದ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಈ ಯೋಜನೆಯ ಅಗತ್ಯತೆಯನ್ನು ಸಣ್ಣ ನೀರಾವರಿ ಸಚಿವರ ಗಮನಕ್ಕೆ ತಂದು ಸಮಗ್ರವಾಗಿ ಮನವರಿಕೆ ಮಾಡಲಾಗಿದ್ದು, ಅದರ ಫಲವಾಗಿ ಅನುದಾನ ಮಂಜೂರಾಗಿದೆ. ಈ ಕಾಮಗಾರಿಯಿಂದ ಕೃಷಿ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ…
ರಸ್ತೆಯಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮಾಡಿದಾತನಿಗೆ ಬೆಳ್ತಂಗಡಿ ಸಂಚಾರಿ ಪೊಲೀಸರ ಶಾಕ್
ಬೆಳ್ತಂಗಡಿ: ಹಲವು ಸಮಯಗಳಿಂದ ಉಜಿರೆ-ಬೆಳ್ತಂಗಡಿಯ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಜಂಕ್ಷನ್ ರಸ್ತೆಯಲ್ಲಿ ಫೆ.8 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ ಎಂಬವರು ಕರ್ತವ್ಯದ ವೇಳೆ ಹೆಲ್ಮೆಟ್ ಧರಿಸದೆ ಆಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಯ ಪ್ರಾಣಕ್ಕೆ ಹಾನಿಯಾಗುವಂತೆ ವೀಲಿಂಗ್ ಮಾಡಿಕೊಂಡು ಧರ್ಮಸ್ಥಳ…
ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭ
ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಮಂಜೂರು ಗೊಂಡ ಸ್ಮಾರ್ಟ್ ಟಿ.ವಿ. ಯನ್ನು ಫೆ. 27 ರಂದು ಬಿಡುಗಡೆ ಮಾಡಲಾಯಿತು.ಈ ಸಂಧರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಇಸ್ಮಾಯಿಲ್, ಉಪಾಧ್ಯಕ್ಷರಾದ ಗೀತಾ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಕ್ಕಿ ಕೆ.ಪಿ, ವಲಯದ ಮೇಲ್ವಿಚಾರಕಿ ಶಿಲ್ಪಾ ನಾಯಕ್, ಸೇವಾಪ್ರತಿನಿಧಿ ಪ್ರೇಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭುವನೇಶ್ವರ, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಮತ್ತು ಎಸ್.ಡಿ.ಎಂ.ಸಿ. ಸದಸ್ಯ ದಿನೇಶ್,…
ಉಜಿರೆ; ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ – ಘಟನೆಯ ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ
ಉಜಿರೆ: ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಸ.ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ವೆಂಕಪ್ಪ ಅವರ ಪತ್ನಿ ರಾಜೀವಿ ಎಂಬವರ ಮನೆಯನ್ನು ಸ್ಥಳೀಯ ಓಡಲ ನಿವಾಸಿ ರಫೀಕ್ ಎಂಬವರು ಸಂಪೂರ್ಣ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದ ವಿಲಕ್ಷಣಕಾರಿ ಘಟನೆ ನಡೆದಿದೆ. ರಾಜೀವಿಯವರು ಸದ್ರಿ ಮನೆಯಲ್ಲಿ ಪತಿ ಹಾಗೂ ಮಗಳೊಂದಿಗೆ ವಾಸವಾಗಿದ್ದರು. ಅಲ್ಲದೆ ಇದೇ ಸ್ಥಿರಾಸ್ತಿಯಲ್ಲಿ ಅಡಿಕೆ ಮತ್ತು ತೆಂಗು ಕೃಷಿಯನ್ನೂ ಮಾಡಿರುತ್ತಾರೆ. ಹೀಗಿರುವಲ್ಲಿ ಫೆ.27ರಂದು 11.00 ಗಂಟೆಗೆ…
ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
ಮಂತ್ರಾಲಯ : ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ವಿಶೇಷವಾಗಿ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರಿಗೆ ಫೆ 25ರಂದು ಶ್ರೀಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಪ್ರಶಸ್ತಿ ನೀಡಿ…
Something went wrong. Please refresh the page and/or try again.
Follow My Blog
Get new content delivered directly to your inbox.
